ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಬೆಳ್ತಂಗಡಿ ಶಾಸಕರ ಕೊಡುಗೆ ಅಪಾರ ಶತಮಾನೋತ್ಸವವನ್ನು ಆಚರಿಸುತ್ತಿರುವ ಕಲ್ಮಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ತಿ ರೂ.2.00 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ವಿಸ್ತರಣೆಗೆ ರೂ.5.00 ಲಕ್ಷ, ಸರಕಾರಿ ಪ್ರೌಢಶಾಲೆಗೆ ನೂತನ ಕೊಠಡಿ ನಿರ್ಮಾಣ ರೂ.17.15 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಭಾಂಗಣಕ್ಕೆ ಟೈಲ್ಸ್ ಅಳವಡಿಕೆಗೆ ರೂ.5.00 ಲಕ್ಷ, ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.17.00 ಲಕ್ಷ ಅನುದಾನ ಒದಗಿಸಿದ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ತಾಲೂಕಿನ ಅಭಿವೃದ್ಧಿಯ ಹರಿಕಾರರು, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಶತಮಾನೋತ್ಸವ ಸಮಿತಿ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಅಧ್ಯಾಪಕ ವೃಂದ ಹಾಗೂ ವಿದ್ಯಾಭಿಮಾನಿಗಳ ಪರವಾಗಿ ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು.

























