ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ. 5 ರಂದು ಜೈನ್ ಪೇಟೆ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಪಕ್ಷದ ಧ್ವಜ ಸ್ವೀಕಾರ ಮಾಡುವ ಮೂಲಕ ಭಾಜಪ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ಸಂಸದರಾದ ಕ್ಯಾ, ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
























