ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ರವರು ಉಪಸ್ಥಿತರಿದ್ದರು.

























