ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಇವರಿಗೆ ದೂರನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸಿ.ಕೆ ಚಂದ್ರಕಲಾ ಉಪಾಧ್ಯಕ್ಷ ರಾಘವ ಕಲ್ಮಂಜ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಬೈರ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮೆಚ್ಚಿನ ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ,ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶ್ರೀಮತಿ ಆಶಾ ಶ್ರೀಮತಿ ಚಂಚಲಾಕ್ಷಿ ಶ್ರೀಮತಿ ಮಂಜುಳ ಮೊದಲಾದವರು ಉಪಸ್ಥಿತರಿದ್ದರು.

























