ಕೊರಿಂಜ : ಜ 11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ,ಸೇವಾಪ್ರತಿನಿಧಿ ಸೀತಾರಾಮ ಆಳ್ವ,ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

























