ಡಿಜಿಪಿ ರಾಮಚಂದ್ರರಾವ್ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ.
ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.
ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ. ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ
ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ AI ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ.ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನಾನು ವಕೀಲರ ಜೊತೆಗೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ಸಮಜಾಯಿಷಿ ನೀಡಿದರು.
ಕಚೇರಿಯಲ್ಲಿಯೇ ಡಿಜಿಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

























