ಕೇರಳ: ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ,ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ,ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಬಡಗರದಲ್ಲಿರುವ ಸಂಬಂಧಿಕರ ಮನೆಯಿಂದ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.
ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಕಾರಣ ಶಿಮ್ಜಿತಾ ತಲೆಮರೆಸಿಕೊಂಡಿದ್ದರು. ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೇರಳವನ್ನು ತೊರೆದು ಮಂಗಳೂರಿಗೆ ಹೋಗಿರುವುದು ತಿಳಿದುಬಂದಿತ್ತು.
ಆಕೆ ದೇಶ ಬಿಟ್ಟು ಹೋಗದಂತೆ ತಡೆಯಲು ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದೀಗ ಸಂಬಂಧಿಕರ ಮನೆಯಿಂದ ಬಂಧಿಸಲಾಗಿದೆ.

























