ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು.
ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು. 384. ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


























