ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ ಆದೇಶಿಸಲಾಗಿದೆ. ಹಾಲಿ ಸದಸ್ಯರ ಅವಧಿ ಜೂನ್ 21ಕ್ಕೆ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.
3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ
ಈಶಾನ್ಯ ಪದವೀಧರ ಕ್ಷೇತ್ರ
ನೈರುತ್ಯ ಪದವೀಧರ ಕ್ಷೇತ್ರ
ಬೆಂಗಳೂರು ಪದವೀಧರ ಕ್ಷೇತ್ರ
ಆಗ್ನೇಯ ಶಿಕ್ಷಕರ ಕ್ಷೇತ್ರ
ನೈರುತ್ಯ ಶಿಕ್ಷಕರ ಕ್ಷೇತ್ರ
ದಕ್ಷಿಣ ಶಿಕ್ಷಕರ ಕ್ಷೇತ್ರ
ನಾಮಪತ್ರ ಸಲ್ಲಿಕೆಗೆ ಮೇ 16 ಕೊನೇ ದಿನ
ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಒಂದು ವೇಳೆ ನಾಮಪತ್ರದಲ್ಲಿ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗವು ಅಂತಹ ನಾಮಪತ್ರವನ್ನು ತಿರಸ್ಕೃತ ಮಾಡಲಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನ ಎಂದು ಚುನಾವಣಾ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ. ಜೂನ್ 3ರಂದು ಮತದಾನ ನಡೆದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.