ಉಪ್ಪಿನಂಗಡಿ: ಬಿಳಿಯೂರು ವಸತಿ ಸಂಕೀರ್ಣದ ನಿವಾಸಿ ಸಿದ್ಧಿಕ್ ಟೈಲರ್ ಅವರ ಪುತ್ರಿ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮುಶಿರಾಭಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ನಿಧನ ಹೊಂದಿದರು.
ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಮುಶಿರಾಭಾನು, ಉಪ್ಪಿನಂಗಡಿ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದರು. ಅಸೌಖ್ಯದಿಂದ ಕಳೆದ ಐದು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕಾಲೇಜು ವಲಯ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.




























