ಪುತ್ತೂರು: ಸಮೀಪದ ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ.
ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ, ಸೈಬರ್ ಅಪರಾಧ ಪತ್ತೆ ದಳ, ಜಿಲ್ಲಾ ವಿಶೇಷ ತನಿಖಾ ತಂಡ ಹಾಗೂ ನಕ್ಸಲ್ ನಿಗ್ರಹ ಪಡೆ ಸೇರಿದಂತೆ ಹಲವು ಪ್ರಮುಖ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ತಮ್ಮ ದಕ್ಷ ಕಾರ್ಯಕ್ಷಮತೆಯನ್ನು ಮೆರೆದಿದ್ದಾರೆ.
ಇವರು ಪಣಂಬೂರು, ಸುರತ್ಕಲ್, ಮುಲ್ಕಿ, ಪಾಂಡೇಶ್ವರ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಬಜ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಮಾದಕ ವಸ್ತು ನಿಗ್ರಹ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸತೀಶ್ ಅವರು ಕುರಿಯ ಗ್ರಾಮದ ಮಾವಿನಕಟ್ಟೆ ದಿ. ಬಾಬು ಪೂಜಾರಿ ಮತ್ತು ಶಿವಮ್ಮ ದಂಪತಿಯ ಪುತ್ರರಾಗಿದ್ದಾರೆ




























