ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ವಾರ್ಷಿಕ ಜಾತ್ರೋತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವ ಏ.30ರಂದು ನಡೆಯಲಿದೆ.
ಬೆಳಿಗ್ಗೆ 9.00 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ತಿಳಿಸಿದ್ದಾರೆ.
2026ರ ನವರಾತ್ರಿ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವಿಗೆ ಸಮರ್ಪಣೆಗೊಳ್ಳಲಿರುವ ‘ಸ್ವರ್ಣ ಕವಚ ‘ಕ್ಕೆ ಧನಸಹಾಯ ನೀಡಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.




























