ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ ಸಿ ರೋಡ್ನಲ್ಲಿ ಯುವತಿ ಲಾವಣ್ಯ ಹ*ತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಹಾಕಿದ್ದಲ್ಲದೇ “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ ನಡೆದಿದೆ ಎಂದು ಆರೋಪಿಸಿ ಬಂಟ್ವಾಳ ಪೊಲೀಸ್ ಠಾಣೆಗೆ ವಿಶ್ವ ಹಿಂದು ಪರಿಷತ್ ಉಪಾಧ್ಯಕ್ಷ ಕೇಶವ ಅವರು ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ವಾಟ್ಸ್ ಆಪ್ ಗ್ರೂಪ್ ಗಳು ಮತ್ತು ಇನ್ಸ್ಟಾಗ್ರಾಮ್ ಖಾತೆಗಳ ಮೂಲಕ ವ್ಯಾಪಕವಾಗಿ ಹಂಚಲಾಗಿದೆ. ಇದರಿಂದ ಸಮಾಜದಲ್ಲಿ ಕೋಮು ಉದ್ವಿಗ್ನತೆ ಮತ್ತು ಗಲಭೆಗಳು ಸೃಷ್ಟಿಯಾಗುವ ಸಾಧ್ಯತೆಯಿದೆ ಇದ್ದು, ಸಮಾಜದ ಸ್ವಾಸ್ಥ್ಯ ಕೆಡಿಸಲು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ದೂರಿನ್ವಯ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

























