ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪುತ್ತಿಲ ಪರಿವಾರ ದ ಕಡೆಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯುತ್ತಿದ್ದು ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದ ಘಟನೆ ನಡೆದಿದ್ದು ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.
ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಸಾರ್ವಜನಿಕರು ಹೆಚ್ಚಾಗಿ ಸೇರಿದ್ದು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ತೊಡಗಿದ್ದಾರೆ.
























