ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ ದರ್ಬೆ ಅವರನ್ನು ಸ್ಥಳಕ್ಕೆ ಕಳುಹಿಸಿದ್ದು, ಸ್ಥಳಕ್ಕೆ ಇಂದು ಭೇಟಿ ನೀಡಿದ ಇಂಜಿನಿಯರ್ ರವರು ಸಮಸ್ಯೆಯ ಕುರಿತು ತನಗೆ ಮನವರಿಯಾಗಿದ್ದು ಇದನ್ನು ಉನ್ನತ ಅಧಿಕಾರಿಗಳಿಗೆ ತಿಳಿಸಿ ರಸ್ತೆಯ ಸಮಸ್ಯೆಯನ್ನು ಬಗೆಹರಿಸಿ ರಸ್ತೆ ಅಗಲೀಕರಣ ಮಾಡುವುದಾಗಿ ಸ್ಥಳೀಯ ನಾಗರಿಕರಿಗೆ ಭರವಸೆ ನೀಡಿರುತ್ತಾರೆ. ಈ ಬಗ್ಗೆ ತಕ್ಷಣ ಸ್ಪಂದಿಸಿದ ಜಿಲ್ಲೆಯ ಕ್ರಿಯಾಶೀಲ, ಹೆಮ್ಮೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಆ ಭಾಗದ ನಾಗರಿಕರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಪ್ಪಿನಂಗಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಸುರೇಶ್ ಅತ್ರಮಜಲ್, ಪುತ್ತೂರು ಬಿಜೆಪಿ ಯುವ ಮೋರ್ಚಾ ದ ಪ್ರಧಾನ ಕಾರ್ಯದರ್ಶಿ ಆದೇಶ ಶೆಟ್ಟಿ, ಹಿರಿಯರಾದ ಜಯಂತ್ ಪುರೋಲಿ, ಸ್ಥಳೀಯರಾದ ಪ್ರತಾಪ್ ಪೆರಿಯಡ್ಕ, ಧರ್ಮಪ್ಪ ನಾಯ್ಕ ಸುಚಿತ್, ಉದಿತ್ ರಂಗಜೆ, ಗಿರೀಶ್, ಪ್ರಶಾಂತ್ ರಾಮಕುಂಜ, ನವೀನ್, ಹರೀಶ್ ಪಟ್ಲ ಇವರುಗಳು ಉಪಸ್ಥಿತರಿದ್ದರು.
























