ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸವಣೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದರು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
























