ಬೆಳ್ತಂಗಡಿ ಮೈರೋಳ್ತಡ್ಕದಲ್ಲಿ ಏರ್‌ಟೆಲ್ ಮೊಬೈಲ್ ಟವರ್‌ನ ಜನೆರೇಟರ್‌ನಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಸ್ಥಳೀಯರು ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್‌ನಲ್ಲಿ ಕಳೆದ ಹಲವಾರು ದಿನಗಳಿಂದ ಡೀಸೆಲ್ ಕಳ್ಳತನವಾಗುತ್ತಿರುವ ಬಗ್ಗೆ ಸ್ಥಳೀಯರಿಗೆ ತೀವ್ರ ಅನುಮಾನವಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ನಿನ್ನೆ ರಾತ್ರಿ ಕಾವಲು ಕಾಯುತ್ತಾ ಕುಳಿತಿದ್ದರು.ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಮೂವರು ಡೀಸೆಲ್ ಕಳ್ಳತನ ಮಾಡಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ಒಗ್ಗೂಡಿ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ಡೀಸೆಲ್‌ಬಕಳವು ಆರೋಪದಡಿ ಬಂಧನವಾದ ಯುವಕರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರು ಎಂದು ಮಾಹಿತಿ ಲಭ್ಯವಾಗಿದೆ.























