ಪುತ್ತೂರು: ವಿಶ್ವಹಿಂದೂ ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.5ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಸಂಜೆ ದಿ| ಗುರುಕೃಷ್ಣ ಸುಳ್ಯ ಇವರ ಸ್ಮರಣಾರ್ಥ ವೀರ ಹಿಂದೂ ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಅವರು ಮಾತನಾಡಿ, ಈಗಾಗಲೇ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ, ರಾಮಾಯಣ, ಮಹಾಭಾರತ ಸ್ಪರ್ಧಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಗಳು ಯಶಸ್ವಿಯಾಗಿ ನಡೆದಿದೆ. ಸೆ.5ಕ್ಕೆ ಬೆಳಗ್ಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಪುರುಷರಿಗೆ ಉದ್ದಕಂಬ ಸ್ಪರ್ಧೆ ನಡೆಯಲಿದೆ ಎಂದವರು ಹೇಳಿದರು.
ಮಧ್ಯಾಹ್ನ ಗಂಟೆ 3 ರಿಂದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ. ಆರಂಭದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಭಗವದ್ಗೀತೆ ಪಠಣ ಮತ್ತು ಶಂಖನಾದ ನಡೆಯಲಿದೆ. ಬಳಿಕ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥನೆ ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕರುಣಾಕರ ಸುವರ್ಣ ಅವರು ಸಾಹಸ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಬಂಟ್ವಾಳ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಪ್ರಾರಂಭವಾಗುವ ಶೋಭಾಯಾತ್ರೆಯ ಮೊದಲು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೊಸರುಕುಡಿಕೆ ನೃತ್ಯರೂಪಕ ನಡೆಯಲಿದೆ.
ನಂತರ ಶೋಭಾಯಾತ್ರೆಯಲ್ಲಿ ಭಾರತ ಮಾತೆ, ಶ್ರೀ ಕೃಷ್ಣನ ಸುಂದರ ರಥ, ಚಂದಳಿಕೆ ವೀರಾಂಜನೇಯ ವ್ಯಾಯಾಮ ಶಾಲೆಯಿಂದ ತಾಲೀಮು ಪ್ರದರ್ಶನ, 8 ಕುಣಿತ ಭಜನಾ ತಂಡಗಳಿಂದ ಕುಣಿತ, ಗೊಂಬೆ, ನಾಸಿಕ್ ಬ್ಯಾಂಡ್ ಮತ್ತು ವಿವಿಧ ಕಲಾತಂಡಗಳು ಭಾಗವಹಿಸಲಿದೆ. ದಿ| ಗುರುಕೃಷ್ಣ ಸುಳ್ಯ ಇವರ ಸ್ಮರಣಾರ್ಥ ವೀರ ಯುವಕರಿಂದ ಸಾಹಸಮಯ ಅಟ್ಟಿಮಡಿಕೆ ಒಡೆಯುವ ಸ್ಪರ್ಧೆಯು ಮುಖ್ಯರಸ್ತೆಯ ಮೂಲಕ ಸಾಗಿ ಅಂಚೆ ಕಚೇರಿಯ ಬಳಿಯಿಂದ ದೇವಸ್ಥಾನದ ಗದ್ದೆಗೆ ಸಾಗಿ ಸಂಜೆ ಗಂಟೆ 6.30 ರಿಂದ ವಿಶ್ವಹಿಂದು ಪರಿಷದ್ ಸ್ಥಾಪನ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಮಾಜಿ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಮಹಿಪಾಲ್ ಹಾಸನ, ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹುಕ್ರಪ್ಪ, ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನ ಮಾಲಕ ಬಲರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಟ್ಟಿ ಮಡಿಕೆ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಹೇಳಿದರು.
ಅಡಿಕೆ ಮಡಿಕೆ ಒಡೆಯುವ ಕಾರ್ಯಕ್ರಮ ಪುತ್ತೂರು ಪೇಟೆಯ 14 ಕಡೆ ನಡೆಯಲಿದೆ. ಬೊಳುವಾರು ಜಂಕ್ಷನ್, ಪ್ರಗತಿ ಆಸ್ಪತ್ರೆ, ಬೊಳುವಾರು ನಂದಿ ಹಾರ್ಡ್ ವೇರ್ಸ್, ಸೂರ್ಯಪ್ರಭಾ ಮುಂಭಾಗ, ಇನ್ ಲ್ಯಾಂಡ್ ಮಯೂರ, ಹಳೆ ಗಣೇಶ್ ಪ್ರಸಾದ್ ಬಳಿ, ಶ್ರೀಧರ್ ಭಟ್ ಜಂಕ್ಷನ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿ, ಸಂಜೀವ ಶೆಟ್ಟಿ ಮುಂಭಾಗ, ಬಸ್ ನಿಲ್ದಾಣ ಜಂಕ್ಷನ್, ಜಿ.ಎಲ್.ಓನ್. ಮಾಲ್ ಆದರ್ಶ ಆಸ್ಪತ್ರೆ, ಚಿಕ್ಕಪುತ್ತೂರು ಮತ್ತು ಕೊನೆಗೆ ಮಹಾಲಿಂಗೇಶ್ವರ ದೇವಸ್ಥಾನ ಬಳಿ ಪೈನಲ್ ಸ್ಪರ್ಧೆ ನಡೆಯಲಿದೆ.
ವಿಜೇತರಿಗೆ ನಗದು ಬಹುಮಾನ ಪ್ರಥಮ 15, ಸಾವಿರ, ದ್ವಿತೀಯ 8 ಸಾವಿರ, ತೃತೀಯ 5 ಸಾವಿರ ಮತ್ತು ಟ್ರೋಪಿ ನೀಡಲಾಗುವುದು ಎಂದು ವಿಶ್ವಹಿಂದು ಪರಿಷದ್ ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಸಂಚಾಲಕ ಕಿರಣ್ ಕುಮಾರ್ ರೈ ಕಬ್ಬಿನಹಿತ್ತಿಲು, ಕಾರ್ಯದರ್ಶಿ ಸೇಸಪ್ಪ ಗೌಡ ಬೆಳ್ಳಿಪ್ಪಾಡಿ, ಸಹ ಸಂಚಾಲಕ ಲಕ್ಷ್ಮಣ ಪೂಜಾರಿ ಬೈಲಾಡಿ, ವಿಶ್ವಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ ತೆಂಕಿಲ, ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ ಉಪಸ್ಥಿತರಿದ್ದರು.

























