ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಸೆ.5ರಂದು ಪುತ್ತೂರಿನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
ಸೆಪ್ಟೆಂಬರ್ 5ರಂದು ನಾಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬಹುದಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ

























