ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ ನಡೆಯಲಿದೆ ಎಂದು ಅಧ್ಯಕ್ಷರಾದ Er. ಶಿವರಾಮ ಎಂ.ಎಸ್. ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ
ಮುಖ್ಯ ಅತಿಥಿ ಯಾಗಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಮತ್ತು JCI ರಾಷ್ಟ್ರೀಯ ತರಬೇತುದಾರರಾದ ಶ್ರೀ ಸತೀಶ್ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಮತ್ತು ಎಂಜಿನಿಯರ್‌ಗಳ ದಿನದ ಸಂದೇಶವನ್ನು ತಿಳಿಸಲಿದ್ದಾರೆ.
ಗೌರವ ಅತಿಥಿಯಾಗಿ ನೂತನ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷರು, ತಾಂತ್ರಿಕ ಸಲಹೆಗಾರರು, Er. ಡಾ.ದಯಾನಂದ ಶೆಟ್ಟಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ಭಾನುವಾರ 20 ಸೆಪ್ಟೆಂಬರ್ 2026 ಸಂಜೆ 5.00 ಗಂಟೆಗೆ ಪುತ್ತೂರಿನ ದರ್ಬೆಯಲ್ಲಿರುವ ಪ್ರಶಾಂತ್ ಮಹಲ್ ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ
ಖಜಾಂಜಿ ಕಾವ್ಯಶ್ರೀ. ಆಡಳಿತ ಸಮಿತಿ ಸದಸ್ಯ Er. ಶಿವಪ್ರಸಾದ ಟಿ. ಉಪಸ್ಥಿರಿದ್ದರು.
























