ಪುತ್ತೂರು : ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಕೃತ್ಯವನ್ನು ಮತ್ತು ರಾಹುಲ್ ಗಾಂಧಿ ಅವರ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ವಿರೋಧಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ಮೌನ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಮಹಮ್ಮದ್ ಆಲಿ,ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪ್ರಚಾರ ಸಮಿತಿಯ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ,ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಚಂದ್ರಹಾಸ ಶೆಟ್ಟಿ ಮತ್ತು ಶಶಿಕಿರಣ್ ರೈ, ವಿಟ್ಲ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಪಕ್ಷದ ಮುಖಂಡರಾದ ಶಕೂರ್ ಹಾಜಿ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸೋಮನಾಥ್ ಉಪ್ಪಿನಂಗಡಿ, ವೇದನಾಥ ಸುವರ್ಣ ನರಿಮೊಗರು,ಬೋಳೋಡಿ ಚಂದ್ರಹಾಸ ರೈ, ಅಬ್ದುಲ್ ರಹಿಮಾನ್ ಯುನಿಕ್ ಮತ್ತಿತರರು ಇದ್ದರು
























