ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
























