ಪುತ್ತೂರು: ಕರ್ನಾಟಕ ನಗರಾಭಿವೃದ್ದಿ ಇಲಾಖೆಯ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ಒಟ್ಟು 10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತನ್ನ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ವಿಟ್ಲ ಪಟ್ಟಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ. ಇವತ್ತಿಗೂ ನಗರಸಭಾ ವ್ಯಾಪ್ತಿಯ ಅನೇಕ ಒಳರಸ್ತೆಗಳು ಅಭಿವೃದ್ದಿಯಾಗದೇ ಇದ್ದು ಜನರ ಅನೇಕ ವರ್ಷಗಳ ಬೇಡಿಕೆಗಳು ಹಾಗೇ ಉಳಿದುಕೊಂಡಿದೆ. ಕೆಲವು ಕಡೆಗಳಲ್ಲಿ ಒಳಚರಂಡಿ ಕಾಮಗಾರಿ ಸೇರಿದಂತೆ ಅನೇಕ ಅಭಿವೃದ್ದಿ ಕಾಮಗಾರಿಗಳು ನಡೆಸಬೇಕಾದ ಅಗತ್ಯತೆ ಇದ್ದು ಇದಕ್ಕಾಗಿ ಅನುದಾನದ ಬೇಡಿಕೆಯನ್ನು ಇಟ್ಟಿದ್ದರು.
ವಿಟ್ಲ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಈಗಾಗಲೇ ಹೆಚ್ಚುವರಿ ಅನುದಾನವನ್ನು ನೀಡಲಾಗಿದ್ದು ಮುಂದಿನ ಜನವರಿ ಅಥವಾ ಫೆಬ್ರವರಿಯೊಳಗೆ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು , ವಿಟ್ಲದಲ್ಲಿ ಅನೇಕ ರಸ್ತೆಗಳ ಅಭಿವೃದ್ದಿ ಆಗಬೇಕಿದ್ದು ಇದಕ್ಕಾಗಿ ವಿಶೇಷ ಅನುದಾನದ ಬೇಡಿಕೆಯನ್ನು ಮುಖ್ಯಮಂತ್ರಿಗಳ ಮುಂದಿಟ್ಟಿದ್ದರು.
ಎರಡೂ ಕಡೆಗೆ ಸೇರಿ ಒಟ್ಟು 10 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿದ್ದಾರೆ. ಈ ಮೂಲಕ ಪುತ್ತೂರು ಹಾಗೂ ವಿಟ್ಲ ದ ಜನತೆಗೆ ಶಾಸಕರು ಶುಭ ಸುದ್ದಿಯನ್ನು ನೀಡಿದ್ದಾರೆ.
























