ಬೆಳಾಲು: (ಸೆ.25) ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ. ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಉಳಿಕೆ ಮೊತ್ತದಿಂದ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ರೂ. 60,000/- ಮೌಲ್ಯದ ಕುರ್ಚಿ ಹಾಗೂ ಊಟದ ಟೇಬಲ್ ಗಳನ್ನು ಅನಂತ ಚತುರ್ದಶಿ ದಿನದಂದು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಅನಂತೇಶ್ವರ ಫ್ರೆಂಡ್ಸ್ ನ ಗೌರವಾಧ್ಯಕ್ಷರು, ಅಧ್ಯಕ್ಷರು,ಪದಾಧಿಕಾರಿಗಳು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
























