ಮಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಮುಸ್ತಫಾ ಪೈಚಾರು ಎಂಬವರನ್ನು ರಾಷ್ಟ್ರೀಯ ತನಿಖಾ ದಳದ(ಎನ್ ಐ ಎ) ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ.
2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆರೋಪಿ ಮುಸ್ತಫಾ ಪೈಚಾರಿಗೆ ಎನ್ ಐ ಎ ಲುಕ್ ಔಟ್ ನೋಟೀಸ್ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.