ಪುತ್ತೂರು: ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯ ಯೋಜನೆಯಡಿ ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿ ಮಾಡಲು ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೊಂದಾಯಿಸಿಕೊಂಡು ಜೇನು ಪೆಟ್ಟಿಗೆ ಸಹಾಯಧನಕ್ಕೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಕಛೇರಿಯನ್ನು (08251-230905, 9449526117)ಸಂಪರ್ಕಿಸಬಹುದಾಗಿದೆ. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.

























