ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ SKPA ಇದರ ವಾರ್ಷಿಕ ಮಹಾ ಸಭೆ ಮಂಗಳೂರಿನ ಬೆಂದೂರ್‌ವೆಲ್‌ನ ಸೈಂಟ್ ಸೆಬಾಸ್ಟಿಯನ್ ಚರ್ಚ್ ಹಾಲ್‌ನ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ SKPA ಇದರ ಅಧ್ಯಕ್ಷ ಹೆಚ್ ಎಸ್ ನಾಗೇಶ್ ಉದ್ಘಾಟಿಸಿದರು. SKPA ಜಿಲ್ಲಾ ಅಧ್ಯಕ್ಷ ನವೀನ್ ರೈ ಪುತ್ತೂರು ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ ಛಾಯಾ ಮತ್ತು ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಸೌತ್ ಕೆನರಾ ಫೊಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ ವಾಸುದೇವ ರಾವ್, ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್ ಬಂಟ್ವಾಳ ಇವರು ಭಾಗವಹಿಸಿದ್ದರು.
ಜಿಲ್ಲಾ ಕಾರ್ಯದರ್ಶಿ ಅಜಯ್ ಕುಮಾರ್, ಕೋಶಾಧಿಕಾರಿ ಹೆರಿಕ್ ಡಿಸೋಜ, ಉಪಾಧ್ಯಕ್ಷ ದೇವರಾಜ್ ಶೆಟ್ಟಿ ಸುರತ್ಕಲ್ ಮತ್ತು ದತ್ತಾತ್ರೇಯ ಕಾರ್ಕಳ, ಜತೆ ಕಾರ್ಯದರ್ಶಿಗಳಾದ ಅಮೃತ್ ಬೀಜಾಡಿ ಮತ್ತು ಹರೀಶ್ ಪಿ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್ ಮತ್ತು ಚಿದಾನಂದ ಉಳ್ಳಾಲ, ಕ್ರೀಡಾ ಕಾರ್ಯದರ್ಶಿಗಳಾದ ಹರೀಶ್ ಕುಂದರ್ ಮತ್ತು ಪ್ರಕಾಶ್ ಸೇರಿಗಾರ, ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕೌಡಂಗೆ, ಮಾಧ್ಯಮ ಕಾರ್ಯದರ್ಶಿ ಲೋಕೇಶ್ ಬಿ.ಎನ್, ಛಾಯಾ ಕಾರ್ಯದರ್ಶಿ ರಾಜೇಶ್ ಶಂಕರಪುರ, ಎಲ್ಲಾ ವಲಯಗಳ ಅಧ್ಯಕ್ಷರು, ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
























