ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೇಪು ಗ್ರಾಮದ ನೀರಕಜೆ ಎಂಬಲ್ಲಿ ನಡೆದಿದೆ.
ವಿಟ್ಲದ ಕೇಪು ಗ್ರಾಮದ ನೀರಕಜೆ ನಿವಾಸಿ, ಟಿಪ್ಪರ್ ಚಾಲಕ ದಿನೇಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. . ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಘಟನೆ ನಡೆದ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.























