ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುಡಿಪು ನಿವಾಸಿ ಮಾಶಿಕ್ ಹಾಗೂ ಬಂಟ್ವಾಳ ತಾಲೂಕಿನ ಪೇರಮೊಗ್ರು ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.ಅಕ್ಟೋಬರ್ 5ರಂದು ಬೆಳಗಿನ ಜಾವ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಬಂಧಿತರನ್ನು ಮುಡಿಪು ನಿವಾಸಿ ಮಾಶಿಕ್ ಹಾಗೂ ಬಂಟ್ವಾಳ ತಾಲೂಕಿನ ಪೇರಮೊಗ್ರು ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಅಕ್ಟೋಬರ್ 5ರಂದು ಬೆಳಗಿನ ಜಾವ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರು ಸಿಬ್ಬಂದಿಗಳೊಂದಿಗೆ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿ ಜಾನುವಾರುಗಳನ್ನು ರಕ್ಷಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

























