ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ. ಇಂದು (ಮೇ 11) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು. “ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ನಡೆಯಬೇಕು ಎಂದರೆ ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಅವರ ಅಭಿಪ್ರಾಯ ಅವರದ್ದು. ಆದರೆ, ಸಿಬಿಐ ತನಿಖೆಯಾಗಬೇಕು ಎಂಬುದು ನಮ್ಮ ಅಭಿಪ್ರಾಯ” ಎಂದರು. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ, ಮೋದಿ ಅವರು ಮತ್ತೆ ಪ್ರಧಾನಿಯಾಗೋದೂ ಅಷ್ಟೇ ಸತ್ಯ. ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ಏನು ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ರಾಜ್ಯದಲ್ಲಿ 24-25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಅಷ್ಟಕ್ಕೂ, ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ” ಎಂದು ವಾಗ್ದಾಳಿ ನಡೆಸಿದರು.