ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರೂ ಮಾಜಿ ಶಾಸಕ, ಹಾಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ ಅತ್ಯಾಪ್ತರು ಎನ್ನಲಾಗಿದೆ.
ಶನಿವಾರ ಮಧ್ಯರಾತ್ರಿಯೇ ಚೇತನ್ ಹಾಗೂ ಲಿಖಿತ್‌ರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರೀತಂಗೌಡ ಕಚೇರಿಯ ಸಿಬ್ಬಂದಿ ಹಾಗೂ ಪ್ರೀತಂಗೌಡ ಆಪ್ತನನ್ನು ವಶಕ್ಕೆ ಪಡೆಯಲಾಗಿದೆ. ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಬಿಜೆಪಿಗೆ ಚೆಕ್‌ಮೇಟ್ ಮಾಡಲಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ನಾಯಕರಿಗೆ ಈ ಮೂಲಕ ಚೆಕ್‌ಮೇಟ್ ಕೊಡಲು ಮುಂದಾಗಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಲಿಖಿತ್ ಪ್ರೀತಂಗೌಡ ಅವರ ಜತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದರು. ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿರುವ ಕೇಸ್‌ನಲ್ಲಿ ಈ ಇಬ್ಬರ ಹೆಸರೇ ಇರಲಿಲ್ಲ. ಕೊನೆಗೆ ಈ ಇಬ್ಬರ ಮೇಲೆ ಹಂಚಿಕೆ ಎಫ್‌ಐಆರ್ ಅನ್ನು ದಾಖಲು ಮಾಡಲಾಗಿತ್ತು. ಹೀಗಾಗಿ ಹೆಸರೇ ಇಲ್ಲದ ಇಬ್ಬರನ್ನು ಎಸ್‌ಐಟಿ ಟೀಂ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.
ಲಿಖಿತ್ ಹಾಗೂ ಚೇತನ್‌ನನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ಗೆ ಕರೆದೊಯ್ದಿದ್ದಾರೆ. ಇಬ್ಬರನ್ನೂ ಪ್ರತ್ಯೇಕ ವಾಹನಗಳಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡಲು ಮುಂದಾಗಲಿದೆ. ಬೆಳಗ್ಗೆಯಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು, ಕೆಲವೊಂದು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.