ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಟ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಸಂಬಂಧ NSUI ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಧಿಕೃತ ದೂರು ಸಲ್ಲಿಸಿ ಮನವಿ ಮಾಡಲಾಗಿದೆ.
ನಟ ಧನ್ವೀರ್ ಅವರ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆಯ ವೇಳೆ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು NSUI ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಹಾಗೂ ಮುಖಂಡರಾದ ಕೌಶಿಕ್, ಸುಶಾನ್ ಮತ್ತು ಏತಾನ್ ಉಪಸ್ಥಿತರಿದ್ದರು.
























