ಪುತ್ತೂರು : ಇಲ್ಲಿನ ನಗರಸಭಾ ವ್ಯಾಪ್ತಿಯ ಮಹಾಲಿಂಗೇಶ್ವರ ದೇವಸ್ಥಾನದ ಬದಿಯಿಂದ ಮುಖ್ಯ ರಸ್ತೆಯ ಮೂಲಕ ಮಡ್ಯಾಲಕಟ್ಟೆ ರೈಲ್ವೇ ಸ್ಟೇಷನ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 3 ಕೋಟಿ ರೂ. ಅನುದಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಸೇರಿದಂತೆ ಹಲವು ಗಣ್ಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.




















