ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.