ಪುತ್ತೂರು: ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ. ಅವರು ನ.7ರಂದು ಮಧ್ಯಾಹ್ನ ನಿಧನರಾದರು. ಸಂತೋಷ್ ವ್ಯೆನ್ಸ್ ಮತ್ತು ಶಿವಾನಿ ಸಾಪ್ಟ್ ಡ್ರಿಂಕ್ಸ್ ಮಾಲಕರಾಗಿದ್ದರು.
ಮಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗು ಪುತ್ರನನ್ನು ಅಗಲಿದ್ದಾರೆ.
ಮೃತದೇಹವನ್ನು ಎ.ಜೆ ಆಸ್ಪತ್ರೆಯಲ್ಲಿ ಶಿಥಲೀಕರಣದಲ್ಲಿ ಇರಿಸಲಾಗುವುದು, ವಿದೇಶದಲ್ಲಿರುವ ಮೃತರ ಇಬ್ಬರು ಪುತ್ರಿಯರು ಆಗಮಿಸುವ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರವನ್ನು ನ.9 ರಂದು ಪುತ್ತೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

























