ಉಪ್ಪಿನಂಗಡಿ: ರವಿ ಪೂಜಾರಿ ಕುಂತೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಜಿಲ್ಲೆಯ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನವೆಂಬರ್14 ಮತ್ತು 15ರಂದು ನಡೆದ 45ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಕುಂತೂರು ಗ್ರಾಮ ಕೋಡ್ಲ ನಿವಾಸಿ ಶ್ರೀ ರವಿ ಪೂಜಾರಿ ಇವರು 200ಮೀ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ಉತ್ತರ ಪ್ರದೇಶದ ಲಕ್ನೋದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಗಳಿಸಿದ್ದಾರೆ.
ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪ್ಪಾಡಿ, ಸರಕಾರಿ ಪ್ರೌಢಶಾಲೆ ಶಾಂತಿನಗರ, ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಪುತ್ತೂರು ವಲಯದ ಕ್ರೀಡಾ ಕಾರ್ಯದರ್ಶಿಯಾಗಿದ್ದು, ಉಪ್ಪಿನಂಗಡಿ ಅಮೃತ್ ಸ್ಟುಡಿಯೋದಲ್ಲಿ ವೀಡಿಯೋಗ್ರಾಫರ್ ಕಮ್ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

























