ದಕ್ಷಿಣಕನ್ನಡ, ನ.18: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರ್ಯಾಂಡಿAಗ್ ಹಾಗೂ ಲೇಬಲಿಂಗ್ ಲೋಪದೋಷಗಳನ್ನು ಎಸಗುತ್ತಿದ್ದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ಬರೋಬ್ಬರಿ 1,240 ಕೆ.ಜಿ. ಅಡುಗೆ ಎಣ್ಣೆಯನ್ನು ಆರೋಗ್ಯ ಇಲಾಖೆಯಿಂದ ವಶಪಡಿಸಿಕೊಳ್ಳಲಾಗಿದೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸಿಬ್ಬಂದಿ ದಾಳಿ ಮಾಡಿದಾಗ ಘಟಕದಲ್ಲಿನ ಲೇಬಲಿಂಗ್ ಹಾಗೂ ಬ್ರ್ಯಾಂಡಿAಗ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಕಂಡುಬAದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು ತರಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ ಎಂದು ರೀಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಇದು ಸ್ಪಷ್ಟವಾಗಿ ಮಿಸ್ಬ್ರ್ಯಾಂಡಿAಗ್ ಹಾಗೂ ಗ್ರಾಹಕರನ್ನು ದಾರಿತಪ್ಪಿಸುವ ಕೃತ್ಯವಾಗಿರುವುದರಿಂದ ಈ ಜಪ್ತಿ ಕ್ರಮ ಕೈಗೊಳ್ಳಲಾಗಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ನಡೆಸಿ ಶೇಂಗಾ ಎಣ್ಣೆಯ 11 ಪೆಟ್ಟಿಗೆಗಳು (ಪ್ರತಿ ಪೆಟ್ಟಿಗೆಗೆ 10 ಕೆ.ಜಿ.), ಶೇಂಗಾ ಎಣ್ಣೆಯ 30 ಕ್ಯಾನ್ಗಳು (ಪ್ರತಿ ಕ್ಯಾನ್ಗೆ 35 ಲೀಟರ್), ಕೊಬ್ಬರಿ ಎಣ್ಣೆಯ 4 ಪೆಟ್ಟಿಗೆಗಳು (ಪ್ರತಿ ಪೆಟ್ಟಿಗೆಗೆ 20 ಕೆ.ಜಿ.) ಒಟ್ಟು ಲಕ್ಷಾಂತರ ಮೌಲ್ಯದ 1,240 ಕೆ.ಜಿ. ಗೂ ಅಧಿಕ ಅಡುಗೆ ಎಣ್ಣೆಯನ್ನು ವಶಪಡಿಸಿಕೊಂಡು ಸಂಸ್ಥೆಯ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಜರುಗಿಸಲು ಇಲಾಖೆ ಮುಂದಾಗಿದೆ.

























