ಮಂಗಳೂರು: ರಾಜ್ಯದ ವಿಪಕ್ಷ ನಾಯಕ ಆರ್. ಅಶೋಕ್ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಪುತ್ತೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನ ಮಾಧ್ಯಮಗಳೊಂದಿಗೆ ಅವರು ಮಾತನಾಡಿ ಮುಂದಿನ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಅಧ್ಯಕ್ಷರು ಹಾಗೂ ಸಂಸದರು ಬಿಜೆಪಿ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.
ಹಿಂದಿನ ಚುನಾವಣೆಯಲ್ಲಿ ಪಕ್ಷದೊಳಗಿನ ಸಮನ್ವಯದ ಕೊರತೆಯಿಂದ ಹಿನ್ನಡೆಯಾಗಿತ್ತು. ಆದರೆ ಈ ಬಾರಿ ಅಂತಹ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಪಕ್ಷದ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
























