ಅಡಿಕೆ ಬೆಳೆಯನ್ನೇ ನಂಬಿರುವ ರೈತರ ಪಾಲಿಗೆ ಬೆಲೆ ಹೆಚ್ಚುವತ್ತ ಸಾಗುತ್ತಿದ್ದು ಮುಖದಲ್ಲಿ ಮಂದಹಾಸ ಮೂಡಿದೆ.
ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ.
ಮೇ 15ರಂದು ಹೊರ ಮಾರುಕಟ್ಟೆಯಲ್ಲಿ 390 ರೂ. ತನಕ ಖರೀದಿಯಾಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಮಾತ್ರ ಇಲ್ಲಿ ಬೇಡಿಕೆ ಇರುವುದು ಕಂಡು ಬಂದಿದೆ. ಕ್ಯಾಂಪ್ಕೋದಲ್ಲಿ ಮೇ 15ರಂದು ಹೊಸ ಅಡಿಕೆಗೆ 380 ರೂ., ಸಿಂಗಲ್ ಚೋಲ್‌ಗೆ 465 ರೂ., ಡಬ್ಬಲ್ ಚೋಲ್‌ಗೆ 475 ರೂ. ದಾಖಲಾಗಿದೆ.
ಕೆ.ಜಿ.ಗೆ 320 ರೂ. ವರೆಗೆ ಏರಿಕೆ ಕಂಡಿದ್ದ ಹಸಿ ಕೊಕ್ಕೋ ಧಾರಣೆ ಇದೀಗ 220 ರೂ.ಗೆ ಇಳಿದಿದೆ. ಬುಧವಾರ ಕ್ಯಾಂಪ್ಕೋ ಸಂಸ್ಥೆ 150-220 ವರೆಗೆ ಹಸಿ ಕೊಕ್ಕೋ ಖರೀದಿಸಿದೆ. ಒಣ ಕೊಕ್ಕೊ ಧಾರಣೆ 650- 700 ರೂ.ಗಳಷ್ಟಿತ್ತು.
ಮಳೆ ಇಲ್ಲದೇ ಅಡಿಕೆ ಕೃಷಿಗೆ ನೀರಿನ ಅಭಾವ ಎದುರಾಗಿದ್ದರು ಬೆಲೆ ಹೆಚ್ಚುವತ್ತ ಸಾಗಿತ್ತಿದ್ದು ರೈತರು ಸಂತಸದಲ್ಲಿದ್ದರು ಎಷ್ಟು ದಿನಗಳ ವರೆಗೆ ಈ ಬೆಲೆ ಇರುತ್ತದೆ ಎಂಬುದು ಕಾದು ನೋಡಬೇಕಾಗಿದೆ.