ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚುನಾವಣಾ ಪ್ರಚಾರದ ವೇಳೆ ಹೊರಗೆ ಬರುತ್ತಿದ್ದಂತೆ ಕೈಯಲ್ಲಿ ಹಾರ ಹಿಡಿದ ಯುವಕನೊಬ್ಬ ಅವರ ಕೆನ್ನೆಗೆ ಬಾರಿಸಿದ್ದಾನೆ.
ಈಶಾನ್ಯ ದೆಹಲಿ ಕ್ಷೇತ್ರದಿಂದ ಕಾಂಗ್ರೆಸ್ ಮತ್ತು ಇಂಡಿಯಾ ಬ್ಲಾಕ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಆಗಿದ್ದರೆ, ಬಿಜೆಪಿ ಈ ಕ್ಷೇತ್ರದಿಂದ ಮನೋಜ್ ತಿವಾರಿ ಅವರನ್ನು ಕಣಕ್ಕಿಳಿಸಿದೆ. ಮೇ 25ರಂದು ದೆಹಲಿಯ ಎಲ್ಲಾ 7 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.