ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ನಡೆದಿದೆ.
ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿದಾನಂದರು ಅವಿವಾಹಿತ. ತನ್ನ ತಾಯಿ ಜೊತೆ ವಾಸವಾಗಿದ್ದರು.
ಇಂದು ಬೆಳಿಗ್ಗೆ ಕೆಲಸಕ್ಕೆ ತನ್ನ ದ್ವಿಚಕ್ರದಲ್ಲಿ(ka 21EB8019) ತೆರಳುವಾಗ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.
ಮೃತರು ತಾಯಿ, ವಿವೇಕಾನಂದ ಕಾಲೇಜು ಉಪನ್ಯಾಸಕ ರಮಾನಂದ ಕಾಮತ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಕಟ್ಟಡದಲ್ಲಿರುವ ಕಾಮತ್ಸ್ ಸ್ವೀಟ್ಸ್ ಮಾಲಕ ಮಂಜುನಾಥ್ ಕಾಮತ್ ಸಹಿತ ಐವರು ಸಹೋದರರನ್ನು ಅಗಲಿದ್ದಾರೆ.