ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮೇ 22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸರು ಗರ್ಡಾಡಿಯಲ್ಲಿರುವ ಶಾಸಕ ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದಾರೆ. ಈ ವೇಳೆ ಕಾರ್ಯಕರ್ತರೂ ಜಮಾಯಿಸುತ್ತಿದ್ದು, ಬಂಧನವನ್ನು ವಿರೋಧಿಸಿದ್ದಾರೆ. ಕೆಲವರು ಫೇಸ್‌ಬುಕ್ ಲೈವ್‌ನಲ್ಲಿ ಬಂದು, ಅಮಾಯಕ ಕಾರ್ಯಕರ್ತನಿಗೆ ಅನ್ಯಾಯವಾದಾಗ ಹೋರಾಟ ನಡೆಸಿದ ಶಾಸಕರನ್ನು ಬಂಧಿಸುವುದಾದರೆ ನಮ್ಮನ್ನೂ ಬಂಧಿಸಿ ಎಂದು ಹೇಳುತ್ತಿದ್ದಾರೆ.
ಪ್ರಕರಣಗಳೇನು?: ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಮೇ 18ರಂದು ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಎಫ್‌ಐಆರ್ ದಾಖಲಾಗಿತ್ತು. ಮೇ 21ರಂದು ಪ್ರತಿಭಟನೆ ನಡೆಸಿದ ಕುರಿತು ಇನ್ನೊಂದು ಪ್ರಕರಣ ದಾಖಾಲು