ಭಾರತ ಕ್ರಿಕೆಟ್ ತಂಡದ ಹಿರಿಯ ವಿಕೆಟ್ ಕೀಪರ್ ಕಮ್ ಬ್ಯಾಟರ್ ದಿನೇಶ್ ಕಾರ್ತಿಕ್ ಅವರು ಐಪಿಎಲ್ಗೆ ನಿವೃತ್ತಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅವರು ಅಧಿಕೃತವಾಗಿ ಕ್ರಿಕೆಟ್ಗೆ ವಿದಾಯ ಹೇಳದಿದ್ದರೂ ಕೂಡ ನಿನ್ನೆ ನಡೆದ ರಾಜಸ್ಥಾನದದ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯವೇ ಅವರಿಗೆ ವಿದಾಯ ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ ಭಾವುಕ ಆಲಿಂಗನವನ್ನು ಹಂಚಿಕೊಂಡರು.
2022ರ ಹರಾಜಿನಲ್ಲಿ ಕಾರ್ತಿಕ್ ಅವರು ಬರೋಬ್ಬರಿ 5.5 ಕೋಟಿ ರೂ. ಪಡೆದು ಆರ್ಸಿಬಿ ಕ್ಯಾಂಪ್ ಸೇರಿದ್ದರು. ಆ ಆವೃತ್ತಿಯಲ್ಲಿ ಕಾರ್ತಿಕ್ 14 ಇನ್ನಿಂಗ್ಸ್ ಗಳಲ್ಲಿ 287 ರನ್ ಬಾರಿಸಿದ್ದರು. ಜತೆಗೆ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು. ಇದೇ ಪ್ರದರ್ಶನ ಕಂಡು ಆಸ್ಟ್ರೇಲಿಯಾದಲ್ಲಿ ನಡೆದ ಕಂಡು ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಆಡಿಸಲಾಗಿತ್ತು. ಆದರೆ ಇಲ್ಲಿ ಕಾರ್ತಿಕ್ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಜತೆಗೆ ಕಳೆದ ಐಪಿಎಲ್ ಟೂರ್ನಿಯಲ್ಲಿ ಘೋರ ವೈಫಲ್ಯ ಎದುರಿಸಿದ್ದರು.
ಐಪಿಎಲ್ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್ಸಿಬಿಗೆ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್ ರಾಯಲ್ಸ್ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್ ಬಾರಿಸಿದ್ದಾರೆ.