ವಿಧಾನ ಪರಿಷತ್ತಿನ ಚುನಾವಣೆಯ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಕೆಲವರು ಸ್ಪರ್ಧಿಸಿದ್ದರೂ, ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಉಂಟಾಗದು’ ಎಂದು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸೋಮವಾರ ಮಂಗಳೂರಿನಲ್ಲಿ ಮಾತಾನಾಡಿದ ಬಿ ವೈ ವಿಜಯೇಂದ್ರ ರಘುಪತಿ ಭಟ್ ಗೆಲ್ಲುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ‘ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ಚೆನ್ನಾಗಿದೆ.’ ನಮ್ಮ ಪಕ್ಷದ ಮುಖಂಡರು, ಹಿರಿಯಲು, ಕಾರ್ಯಕರ್ತರು ಸಾಕಷ್ಟು ಶ್ರಮವನ್ನು ಹಾಕುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರರು ಆಶೀರ್ವಾದ ಮಾಡುತ್ತಿದ್ದಾರೆ. ಮೊದಲ ಬಾರಿ ಸ್ಪರ್ಧಿಸುತ್ತಿದ್ದರೂ ಓರ್ವ ಸಜ್ಜನ ರಾಜಕಾರಣಿ ಎಂದು ಜನ ಮಾತನಾಡುತ್ತಿದ್ದಾರೆ.ಭೋಜೆ ಗೌಡರು ಕಳೆದ ಬಾರಿ ಗೆದ್ದ ಅನುಭವಿ ರಾಜಕಾರಣಿ ಜೊತೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಈ ಕಾರಣದಿಂದಾಗಿ ಎರಡು ಅಭ್ಯರ್ಥಿಗಳು ದೊಡ್ಡ ಅಂತರದ ಮತಗಳಿಂದ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಗೆಲುವಿನ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು.
ಬಂಡಾಯ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಸಿಕೊಂಡು, ತಾವೇ ಬಿಜೆಪಿ ಅಭ್ಯರ್ಥಿಗಳು ಎಂದು ಮತ ಯಾಚಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಿನ್ನೆಯಿಂದ ಈ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮತದಾರರನ್ನು ತಲುಪುತ್ತಿದ್ದಾರೆ. ಮತದಾರರೂ ಪ್ರಬುದ್ಧರಿದ್ದಾರೆ. ಬಿಜೆಪಿ ಬಗ್ಗೆ ಹಾಗೂ ಪಕ್ಷದ ಅಭ್ಯರ್ಥಿಗಳ ಬಗ್ಗೆ ವಿಶ್ವಾಸವಿಟ್ಟುಕೊಂಡಿದ್ದಾರೆ.
ಬಂಡಾಯ ಅಭ್ಯರ್ಥಿ ಮತ್ತು ಪಕ್ಷದ ಅಧಿಕೃತ ಅಭ್ಯರ್ಥಿಯ ಬಗ್ಗೆ ಮತದಾರರಿಗೆ ಗೊಂದಲವಿಲ್ಲ ಎಂಬುದಾಗಿ ತಿಳಿಸಿದರು.
ಉಡುಪಿಯಲ್ಲಿ ಮಾತಾನಾಡಿದ ಬಿ ವೈ ರಘಪತಿ ಭಟ್ ಅವರಿಗೆ ಅನ್ಯಾಯವಾಗಿಲ್ಲ.ರಘುಪತಿ ಭಟ್ ಅವರಿಗೆ ಪಕ್ಷದಿಂದ ಯಾವುದೇ ಅನ್ಯಾಯ ಆಗಿಲ್ಲ. ಸಾಕಷ್ಟು ಬಾರಿ ಅವಕಾಶ ಸಿಕ್ಕಿದೆ. ಶಾಸಕರಾಗಿ ಆಯ್ಕೆಯಾಗಿದ್ದರು. ಇನ್ನೂ ಅನೇಕರಿಗೆ ಅವಕಾಶ ಸಿಗಬೇಕಾಗಿದೆ. ಅವಕಾಶ ಸಿಕ್ಕವರಿಗೆ ಮತ್ತೆ ಅವಕಾಶ ಸಿಗಬೇಕೆಂಬುವುದು ಸರಿಯಲ್ಲ ಅದು ಸ್ವಾರ್ಥ ಧೋರಣೆಯಾಗಿದೆ. ವಿಧಾನಸಭೆ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಆಕಾಂಕ್ಷಿಗಳ ಪ್ರಾಂತವಾರು ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಿದ್ದೇವೆ. ಅಭ್ಯರ್ಥಿಗಳು ಯಾರಾಗಬೇಕು ಎಂಬುದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ’ ಇದರಲ್ಲಿ ಸಂಶಯ ಮತ್ತು ಗೊಂದಲ ಬೇಡ ಎಂದು ತಿಳಿಸಿದ ಬಿ ವೈ ತಿಳಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ಪ್ರಕರಣ:-
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ವಿನಾಕಾರಣ ನಮ್ಮ ಕಾರ್ಯಕರ್ತರ ಹೆಸರನ್ನು ಎಫ್‌ಐಆರ್ ನಲ್ಲಿ ಸೇರಿಸಿ ಅಧಿಕಾರ ದುರ್ಬಳಕೆ ಮಾಡುವ ಮೂಲಕ ಕೆಳಮಟ್ಟದ ರಾಜಕೀಯದ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಬಿಜೆಪಿಯ ಯುವಮೋರ್ಚಾದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೆಸರನ್ನು ದುರುದ್ದೇಶದಿಂದ ಎಫ್‌ಐಆರ್‌ನಲ್ಲಿ ಸೇರಿಸಿದ್ದು ಖಂಡನೀಯ. ಇದರ ವಿರುದ್ಧ ಹೋರಾಟ ಮಾಡುತ್ತೇವೆ’ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ರಾಜ್ಯಾಧ್ಯಕ್ಷರು ತಿಳಿಸಿದರು.