ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಆಕ್ರೋಶಗೊಂಡ ಮುಸ್ಲಿಂ ಯುವಕರ ತಂಡದಿಂದ ಹಿಂದು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ
ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದನ್ನು ಕಂಡು ನಿಧಾನವಾಗಿ ಚಲಾಯಿಸಿ ಎಂದ ಕಾರಣಕ್ಕೆ ಮುಸ್ಲಿಂ ಪುಂಡರು ಅಭಿಲಾಷ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
ಈ ಮುಸ್ಲಿಂ ಯುವಕರ ತಂಡ ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೆ ಹಿಂದೂ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಸದ್ಯ ಮಂಡ್ಯದ ಬೆಳ್ಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಳಿಕ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು ಕೋಮು ಗಲಭೆಯಾಗುವ ಸಂಭವವಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆಯಾಗಿದೆ.
ನಾಗಮಂಲದ ತಾಲೂಕಿನ ಬೆಳ್ಳೂರಿನ ಸಂತೆ ರಸ್ತೆಯಲ್ಲಿ ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಅತಿ ವೇಗದಲ್ಲಿ ಕಾರು ಓಡಿಸಿಕೊಂಡು ಹೋಗಿದ್ದರು. ಇದನ್ನು ಅಭಿಲಾಷ್ ಹಾಗೂ ನಾಗೇಶ್ ಎಂಬುವರು ಪ್ರಶ್ನಿಸಿದ್ದರು. ಅಲ್ಲದೆ ವೇಗವಾಗಿ ಕಾರು ಓಡಿಸದಂತೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು.ಇದರಿಂದ ಆಕ್ರೋಶಗೊಂಡಿದ್ದ ಮುಸ್ಲಿಂ ಯುವಕರು ದೊಡ್ಡ ಸಂಖ್ಯೆಯಲ್ಲಿ ತಂಡ ಕಟ್ಟಿಕೊಂಡು ಬಂದು ಇಂದು ಅಭಿಲಾಷ್ ನನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಳಿಕ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ಇದರಿಂದ ಆಕ್ರೋಶಗೊಂಡಿರುವ ಜನರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿರೋಧಗಳು ಸಾಮಾಜಿಕಜಾಲತಾಣದಲ್ಲಿ ಹರಿದಾಡುತ್ತಿದೆ.