ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಪುರುಷರಕಟ್ಟೆ ನಲ್ಲಿ ಬೋರ್ವೆಲ್ ಕೊರೆಯವ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆದಿದೆ.
ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು.
ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ಘಟನೆ ಕುರಿತಂತೆ ಎಸ್ ಡಿಪಿಐ ಕಾರ್ಯಕರ್ತರ ಮೇಲೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.