ಪುತ್ತೂರು: ಬೆಂಗಳೂರಿನ ಕಂಪೆನಿಯೊಂದಕ್ಕೆ 2500 ಹುದ್ದೆಗೆ ಶಾಸಕ ಅಶೋಕ್ ಕುಮಾರ್ ರೈ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೇರ ನೇಮಕಾತಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು 2000 ಮಹಿಳೆಯರು ಹಾಗೂ 500 ಪುರುಷ ಅಭ್ಯರ್ಥಿಗಳು ನೇರ ನೇಮಕಾತಿ ಮೂಲಕ ಆಯ್ಕೆಯಾಗಲಿದ್ದಾರೆ.
ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ವ್ಯಾಪ್ತಿಯ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಎಪನಿಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಉತ್ತಮ ವೇತನವನ್ನು ನೀಡಲಿದೆ.
ಎಸ್‌ಎಸ್‌ಎಲ್‌ಸಿ ಯಿಂದ ಪದವಿ ತನಕ ವ್ಯಾಸಂಗ ಮಾಡಿರುವ 18 ರಿಂದ 26 ವರ್ಷದ ವಯೋಮಾನದ 2000 ಮಹಿಳಾ ಅಭ್ಯರ್ಥಿಗಳು ಹಾಗೂ 500 ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ನಾಲ್ಕು ಫೋಟೋ, ಆಧಾರ್ ಕಾರ್ಡು, ಪಾನ್ ಕಾರ್ಡು ಲಗತ್ತಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಸಹಿತ ತರಬೇತಿ ಕಾರ್ಯವೂ ನಡೆಯಲಿದೆ.
ಐಟಿಐ, ವೆಲ್ಡರ್ ಹಗೂ ಟೆಕ್ನಿಷಿಯನ್‌ಗಳಿಗೂ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ಇದರ ಪ್ರಯೋಜನವವನ್ನು ಪಡೆದುಕೊಳ್ಳುವಂತೆ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಉತ್ತಮ ಕಂಪೆನಿಯ ಜೊತೆ ಟೈಅಪ್ ಮಾಡಿಕೊಂಡು ತನ್ನ ವಿಧಾನಸಭಾ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಅಭ್ಯರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳಬಹುದಾಗಿದೆ. ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉತ್ತಮ ವೇತನ ಮತ್ತು ಇತರೆ ಸೌಲಭ್ಯಗಳನ್ನು ಕಂಪೆನಿ ಒದಗಿಸಲಿದೆ. ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.