ಈತನ್ಮಧ್ಯೆ ಚುನಾವಣಾ ಫಲಿತಾಂಶದ ಬಗ್ಗೆ ಈಗಲೇ ಚರ್ಚೆ ಆರಂಭಗೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ಮತ್ತೊಮ್ಮೆ ನಿರಾತಂಕವಾಗಿ ಬಿಜೆಪಿ ಆಡಳಿತಕ್ಕೆ ಬರುತ್ತೆ ಎಂದು ಹೇಳಿದರೆ, ಅತ್ತ ವಿಪಕ್ಷಗಳು ಈ ಸಲ ಬಿಜೆಪಿ ಮಕಾಡೆ ಮಲಗಿ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳ್ತಿದ್ದಾರೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಅನ್ನೋದು ಜೂನ್ 4ಕ್ಕೆ ತಿಳಿಯಲಿದೆ.
ವಿಶೇಷ ಅಂದ್ರೆ ಫಲಿತಾಂಶ ಜೂನ್ 4ಕ್ಕೆ ಇದ್ದರೂ ಫಲಿತಾಂಶಕ್ಕೂ ಮುನ್ನವೇ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಮತ್ತು ಆಡಳಿತಾರೂಢ ಎನ್‌ಡಿಎ ಒಕ್ಕೂಟ ಸಭೆ ಕರೆದಿದೆ. ಎರಡೂ ಪಕ್ಷಗಳ ಒಕ್ಕೂಟ ಫಲಿತಾಂಶಕ್ಕೂ ಮುನ್ನವೇ ಸಭೆ ಕರೆದಿರೋದ್ರಿಂದ ರಾಜಕೀಯ ವಲಯದಲ್ಲಿ ಈ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದ್ಯಾ ಅನ್ನುವ ಅನುಮಾನವನ್ನೂ ಸೃಷ್ಟಿಸಿದೆ. ಈಗಾಗಲೇ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಜೂನ್ 1 ರಂದು ಮಹತ್ವದ ಸಭೆ ಕರೆದಿದ್ದು, ಮತ್ತೊಂದೆಡೆ ಚುನಾವಣಾ ಫಲಿತಾಂಶಕ್ಕೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಭೆ ಕರೆದಿದೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೂನ್ 1ರಂದು ಇಂಡಿಯಾ ಮೈತ್ರಿಕೂಟದ ಸಭೆ ಕರೆದಿದ್ದಾರೆ. ಕೊನೆಯ ಹಂತದ ಮತದಾನದ ದಿನದಂದು ಇಂಡಿಯಾ ಮೈತ್ರಿಕೂಟದ ಉನ್ನತ ನಾಯಕರು ದೆಹಲಿಯಲ್ಲಿ ಚುನಾವಣೆಯ ಬಗ್ಗೆ ವಿಚಾರ ವಿನಿಮಯ ಮಾಡಿ ಚರ್ಚೆ ನಡೆಸಲಿದ್ದಾರೆ. ಮೂಲಗಳ ಪ್ರಕಾರ ವಿಪಕ್ಷಗಳ ಇಂಡಿಯಾ ಅಲಯನ್ಸ್ 300 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಹೀಗಾಗಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂದಿನ ಕಾರ್ಯತಂತ್ರಗಳ ಬಗ್ಗೆಯೂ ಚರ್ಚೆ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ ಬಿಜೆಪಿ ನೇತೃತ್ವದ ಎನ್‌ಡಿಎ ಕೂಡ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಜೈಪುರದಲ್ಲಿ ಸಭೆ ನಡೆಸಲಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಚುನಾವಣಾ ಫಲಿತಾಂಶ ಮತ್ತು ಫಲಿತಾಂಶದ ನಂತರದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿಯ ಎಲ್ಲಾ ಘಟಕಗಳು ಸಭೆಯಲ್ಲಿ ಭಾಗವಹಿಸಲಿವೆ. ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂಬ ಭರವಸೆಯಲ್ಲಿ ಬಿಜೆಪಿ ಇದೆ ಎಂದು ಹೇಳಲಾಗ್ತಿದ್ದು, ಮತ್ತೊಂದೆಡೆ ಅಧಿಕಾರ ಕಳೆದುಕೊಳ್ಳುವ ಆತಂಕ ಕೂಡ ಬಿಜೆಪಿಯ ಒಳಗೆ ಇದೆ ಎಂಬ ಚರ್ಚೆ ಶುರುವಾಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ಈಗಲೇ ಚರ್ಚೆ ಆರಂಭಗೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ಮತ್ತೊಮ್ಮೆ ನಿರಾತಂಕವಾಗಿ ಬಿಜೆಪಿ ಆಡಳಿತಕ್ಕೆ ಬರುತ್ತೆ ಎಂದು ಹೇಳಿದರೆ, ಅತ್ತ ವಿಪಕ್ಷಗಳು ಈ ಸಲ ಬಿಜೆಪಿ ಮಕಾಡೆ ಮಲಗಿ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳ್ತಿದ್ದಾರೆ.