ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ . ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್ 2 . ಕೃಷಿ ನಿರ್ವಹಣಾ ಅಧಿಕಾರಿ – 250, ಕೃಷಿ ಅಭಿವೃದ್ಧಿ ಅಧಿಕಾರಿ – 1,250 ಮತ್ತು ಕೃಷಿ ಸ್ಫೂರ್ತಿ – 3,750 ಹುದ್ದೆಗಳು ಖಾಲಿ ಇವೆ. ಅಂಗೀಕೃತ ವಿಶ್ವ ವಿದ್ಯನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ. ಇನ್ನು ಕೃಷಿ ಸ್ಫೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ಕೃಷಿ ನಿರ್ವಹಣಾ ಅಧಿಕಾರಿ – 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ – 21-40 ವರ್ಷ ಮತ್ತು ಕೃಷಿ ಸ್ಫೂರ್ತಿ – 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಕೃಷಿ ನಿರ್ವಹಣಾ ಅಧಿಕಾರಿ – 944 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 826 ರೂ. ಮತ್ತು ಕೃಷಿ ಸ್ಫೂರ್ತಿ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್ ಮೂಲಕ ಪಾವತಿಸಬೇಕು. ಆನ್‌ಲೈನ್ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕೃಷಿ ನಿರ್ವಹಣಾ ಅಧಿಕಾರಿ – 50,000 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 40,000 ರೂ. ಮತ್ತು ಕೃಷಿ ಸ್ಫೂರ್ತಿ – 25,000 ರೂ. ಮಾಸಿಕ ವೇತನ ಲಭ್ಯ.
ಅರ್ಜಿ ಸಲ್ಲಿಸುವ ವಿಧಾನ
https://pay.bharatiyapashupalan.com/onlinerequirment
- ಅಗತ್ಯ ಮಾಹಿತಿಗಳನ್ನು ತುಂಬಿ.
- ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಫಾರಂನ ಪ್ರಿಂಟ್‌ಔಟ್ ತೆಗೆದಿಡಿ.