ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ.
ಜೂನ್ 3 ರ ಸೋಮವಾರದಂದು ಪ್ರತ್ಯೇಕವಾಗಿ ಮೂರು ಪದವೀಧರ ಕ್ಷೇತ್ರ ಮತ್ತು ಮೂರು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ದಿನಾಂಕ 3-6-2024 ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್ ಬಿ ಅಧಿಸೂಚನೆ ಹೊರಡಿಸಿದ್ದಾರೆ.